Wednesday, 3 March 2021

ಕೊರೊನಾ ನಿರ್ವಹಣೆಯಲ್ಲಿ 3000 ಕೋಟಿ ಭ್ರಷ್ಟಾಚಾರ : ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಕೊರೊನಾ ನಿರ್ವಹಣೆಯಲ್ಲಿ 3000 ಕೋಟಿ ಭ್ರಷ್ಟಾಚಾರ : ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 

ಚಿಕ್ಕಬಳ್ಳಾಪುರ, ಮಾ.4- ಕೊರೊನ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ 3000 ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದು, ಇದರ ಸಂಪೂರ್ಣ ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭಿರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಬೃಹತ್ ಜನಧ್ವನಿ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿ ಕೊರೊನಾ ಮಹಾಮಾರಿ ಆವರಿಸಿಕೊಂಡಿದ್ದು, ಯಾವುದೇ ದೇಶ ಕೊರೊನಾ ನೆಪ ಹೇಳಿ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿಲ್ಲ, ಆದರೆ, ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ ಹೆಸರಲ್ಲಿ ಹಣ ಲೂಟಿ ಹೊಡೆದಿದೆ ಎಂದು ದೂರಿದರು.

ಈ ವಿಷಯನ್ನು ಈಗಾಗಲೇ ವಿಧಾನ ಸಭೆಯಲ್ಲಿ ಅಂಕಿ-ಅಂಶಗಳ ಸಮೇತ ಪ್ರಸ್ತಾಪಿಸಿದ್ದೇನೆ. ಆದರೆ, ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪುತಿಲ್ಲ. ಇದಕ್ಕಾಗಿ ಅನೇಕ ವಿಷಯದಲ್ಲಿ ರಾಜ್ಯ ಸರ್ಕಾರದ ಮೇಲೆ ಅನುಮಾನವಿದೆ ಎಂದರು.ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಬರಪೀಡಿತ ಪ್ರದೇಶಗಳೆಂದು ಮನಗಂಡು ಇಲ್ಲಿನ ರೈತ ಹಾಗೂ ಕುಡಿಯುವ ನೀರಿನ ಸೌಕರ್ಯಕ್ಕಾಗಿ ಎತ್ತಿನಹೊಳೆ, ಕೆ.ಸಿ.ವ್ಯಾಲಿ ಹೆಚ್.ಎನ್.ವ್ಯಾಲಿ ಯೋಜನೆಗಳಿಗೆ ಈಗಿರುವ ಸರ್ಕಾರದ ವಿರೋಧದ ನಡುವೆಯೂ ನನ್ನ ಕಾಲಾವಯಲ್ಲಿ ಮಂಜೂರಾತಿ ನೀಡಿದ್ದೇನೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಗೆ 13 ಸಾವಿರ ಕೋಟಿ, ಹೆಚ್.ಎನ್.ವ್ಯಾಲಿಗೆ 1200 ಕೋಟಿ ಯೋಜನೆಗಳ ಮಂಜೂರಾತಿ ನೀಡಿದ್ದಕ್ಕಾಗಿ ಇಲ್ಲಿನ ಕಂದವಾರ ಕೆರೆ ತುಂಬಿರುವುದು ನನಗೆ ಹರ್ಷ ತಂದಿದೆ. ಕಾಂಗ್ರೆಸ್ ಪಕ್ಷ ಅಕಾರದ ಅವಯಲ್ಲಿ ಯಾರೂ ಹಸಿವುನಿಂದ ತಾಳಬಾರದು ಎನ್ನುವ ಉದ್ದೇಶದಿಂದ ತಲಾ 7ಕೆಜಿ ಅಕ್ಕಿ ನೀಡಲು ಪ್ರಾರಂಭಿಸಿದೆ. ದುರಂತ ಎಂದರೆ ಇಂದಿನ ಸರ್ಕಾರ ಕೇವಲ ತಲಾ ಮೂರು ಕೆ.ಜಿ. ಅಕ್ಕಿ ನೀಡುವ ಮೂಲಕ ಹಸಿದ ಹೊಟ್ಟೆಗೆ ಅನ್ನ ನೀಡದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದೇ ಬರುತ್ತದೆ. ಆಗ 10 ಕೆ.ಜಿ ಅಕ್ಕಿ ನೀಡಲಾಗುವುದೆಂದು ಇದೇ ವೇಳೆ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಇಲ್ಲಿನ ಕಂದವಾರ ಕೆರೆಗೆ ಬಾಗಿನ ಅರ್ಪಣೆ ಮಾಡಿದರು.

ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ದೃವನಾರಾಯಣ್, ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್, ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟಿಲï, ಕೇಂದ್ರದ ಮಾಜಿ ಸಚಿವರಾದ ಎಂ.ವೀರಪ್ಪಮೊಯ್ಲಿ, ಕೆ.ಹೆಚ್.ಮುನಿಯಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮುಖಂಡರಾದ ವಿ.ಮುನಿಯಪ್ಪ, ಕೃಷ್ಣಬೈರೇಗೌಡ, ಎನ್.ಹೆಚ್.ಶಿವಶಂಕರರೆಡ್ಡಿ, ಹೆಚ್.ಆಂಜನೇಯಲು, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಎಸ್.ಎಂ.ಮುನಿಯಪ್ಪ, ಎನ್.ಸಂಪಂಗಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.


SHARE THIS

Author:

0 التعليقات: