Sunday, 28 March 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು ಪತ್ತೆ


ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು ಪತ್ತೆ

ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 40,414 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು 27,13,875 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಒಂದೇ ದಿನದಲ್ಲಿ ಈ ಪ್ರಮಾಣದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ. ಮಾ.25 ರಂದು ರಾಜ್ಯದಲ್ಲಿ ಕೊರೊನಾ ಸಂಖ್ಯೆ 26 ಲಕ್ಷಕ್ಕೆ ಏರಿಕೆಯಾಗಿತ್ತು.

ಕೊರೊನಾ ಕಾರಣದಿಂದಾಗಿ 108 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 54,181ಕ್ಕೆ ಏರಿಕೆಯಾಗಿದೆ. ಮುಂಬೈ ನಲ್ಲಿಯೂ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿವೆ.

ಭಾನುವಾರ ಭಾರತದಲ್ಲಿ 62,714 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಯಲ್ಲಿ 28,739 ಜನರು ಗುಣಮುಖಗೊಂಡಿದ್ದಾರೆ, 312 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ.

ಮಾರ್ಚ್ 27ರ ಶನಿವಾರದ ತನಕ ದೇಶದಲ್ಲಿ 24,09,50,842 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಶನಿವಾರ 11,81,289 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಭಾರತದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310. ಒಟ್ಟು ಮೃತಪಟ್ಟವರ ಸಂಖ್ಯೆ 1,61,552 ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇಂದು ದೇಶದ ಒಟ್ಟು ಕೊರೊನಾ ಪ್ರಕರಣ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ.SHARE THIS

Author:

0 التعليقات: