Monday, 1 March 2021

ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ


ರಾಷ್ಟ್ರೀಯ ಕಾಂಗ್ರೆಸ್ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು ಹೋಗಿದ್ದರು. ಅಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು ಕಾಂಗ್ರೆಸ್ ನಲ್ಲಿ ಪಕ್ಷದ ಹಿರಿಯ ನಾಯಕರೇ ಬಂಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯವಿದೆ ಎಂದರು.

ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು ರಾಷ್ಟ್ರ ರಾಜಕಾರಣಕ್ಕೆ ಬರಬೇಕು ಎಂದು ದೇವೇಗೌಡರು ಹೇಳಿದ್ದಾರೆ.SHARE THIS

Author:

0 التعليقات: