Monday, 1 March 2021

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪೊಲೀಸರ ವಶಕ್ಕೆ


 ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪೊಲೀಸರ ವಶಕ್ಕೆ

ತಿರುಪತಿ : ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ತಿರುಪತಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹಾಜರಾಗಲು ಚಂದ್ರಬಾಬು ನಾಯ್ಡು ತೆರಳುತ್ತಿದ್ದ ವೇಳೆ ಏರ್​ಪೋರ್ಟ್​ನಲ್ಲೇ ರೇನಿಗುಂಟಾ ಪೊಲೀಸರು ತಡೆದಿದ್ದಾರೆ. ಇದನ್ನು ಖಂಡಿಸಿದ ನಾಯ್ಡು, ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಲು ಕುಳಿತಿದ್ದಾರೆ. ಈ ವೇಳೆ ರೇನಿಗುಂಟಾ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೇಕಾದರೆ ನನ್ನನ್ನು ಬಂಧಿಸಿ. ಆದರೆ ನಿರ್ಭಂಧಿಸಬೇಡಿ. ಇಲ್ಲಿ ಏನು ನಡೆಯುತ್ತಿದೆ? ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತಿದ್ದೇನಾ? ಎಂದು ಚಂದ್ರಬಾಬು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.


SHARE THIS

Author:

0 التعليقات: