Wednesday, 31 March 2021

ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸಂಚಾರ ಆರಂಭ

 

ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ; ಅಲಯನ್ಸ್ ಏರ್ ಹುಬ್ಬಳ್ಳಿ-ಹೈದರಾಬಾದ್ ಮಾರ್ಗದಲ್ಲಿ ವಿಮಾನ ಸಂಚಾರವನ್ನು ಆರಂಭಿಸಿದೆ. ಹುಬ್ಬಳ್ಳಿ-ಮಂಗಳೂರು ನಡುವೆ ವಿಮಾನ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಹ ಮನವಿ ಮಾಡಲಾಗಿದೆ.

ಬುಧವಾರ ಅಲಯನ್ಸ್ ಏರ್ ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸೇವೆಗೆ ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಅಲಯನ್ಸ್ ಏರ್ ಸಿಇಒ ಹರ್ಪ್ರೀತ್ ಎ ಡಿ.ಸಿಂಗ್ ಮತ್ತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಉಪಸ್ಥಿತರಿದ್ದರು.

ಎಐ 9879 ವಿಮಾನ ಹೈದರಾಬಾದ್-ಹುಬ್ಬಳ್ಳಿ ನಡುವೆ ಸಂಚಾರ ನಡೆಸಲಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೈದರಾಬಾದ್‌ನಿಂದ ಬೆಳಗ್ಗೆ 6.25ಕ್ಕೆ ಹೊರಡುವ ವಿಮಾನ 8 ಗಂಟೆಗೆ ಹುಬ್ಬಳ್ಳಿಗೆ ತಲುಪಲಿದೆ.

ಎಐ 9890 ವಿಮಾನ ಹುಬ್ಬಳ್ಳಿ-ಹೈದರಾಬಾದ್ ನಡುವೆ ಸಂಚಾರ ನಡೆಸಲಿದೆ. ಬೆಳಗ್ಗೆ 8.25ಕ್ಕೆ ಹುಬ್ಬಳ್ಳಿಯಿಂದ ಹೊರಡುವ ವಿಮಾನ 9.55ಕ್ಕೆ ಹೈದರಾಬಾದ್ ತಲುಪಲಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಈ ವಿಮಾನ ಸಂಚಾರ ನಡೆಸಲಿದೆ.


SHARE THIS

Author:

0 التعليقات: