Wednesday, 31 March 2021

ಬಿಎಸ್‌ವೈ ವಿರುದ್ಧ ಸಚಿವ ಈಶ್ವರಪ್ಪ ದೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಡಿ.ಕೆ.ಶಿವಕುಮಾರ್ ಆಗ್ರಹ


ಬಿಎಸ್‌ವೈ ವಿರುದ್ಧ ಸಚಿವ ಈಶ್ವರಪ್ಪ ದೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು, ಮಾ.31: 'ತನ್ನ ಇಲಾಖೆ ವಿಚಾರಗಳಲ್ಲಿ ಕಾನೂನು ಮೀರಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರು ಬಿಜೆಪಿ ವರಿಷ್ಠರು ಮತ್ತು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

'ಬಿಜೆಪಿಯ ಹಿರಿಯ ಸಚಿವರೊಬ್ಬರು ಮುಖ್ಯಮಂತ್ರಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಥವಾ ಆರೋಪಗಳು ಸತ್ಯಕ್ಕೆ ದೂರವಾಗಿದ್ದಲ್ಲಿ ಸಚಿವರನ್ನು ಸಂಪುಟದಿಂದ ಕಿತ್ತೊಗೆಯಬೇಕು. ರಾಜ್ಯದ ಬಿಜೆಪಿ ಸರಕಾರ ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿದೆ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.SHARE THIS

Author:

0 التعليقات: