Thursday, 25 March 2021

ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಶುಕ್ರವಾರ 'ಭಾರತ್ ಬಂದ್'


ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಶುಕ್ರವಾರ 'ಭಾರತ್ ಬಂದ್'

ಬೆಂಗಳೂರು, : ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ನೀತಿಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಕಳೆದ ನಾಲ್ಕು ತಿಂಗಳಿಂದ ಹೊಸದಿಲ್ಲಿ ಸೇರಿದಂತೆ ದೇಶಾದ್ಯಂತ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು, ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ನಾಳೆ(ಮಾ.26) ಭಾರತ್ ಬಂದ್‍ಗೆ ಕರೆ ನೀಡಿವೆ.

ದೇಶಾದ್ಯಂತ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ನಾಳೆಗೆ ನಾಲ್ಕು ತಿಂಗಳು ಆಗಲಿದ್ದು, ಇದರ ಅಂಗವಾಗಿ ರಾಷ್ಟ್ರೀಯ ಸಂಯುಕ್ತ ಕಿಸಾನ್‍ ಮೋರ್ಚ ವತಿಯಿಂದ ನಾಳೆ 'ಭಾರತ್ ಬಂದ್' ಕರೆ ನೀಡಿದೆ. ಇದಕ್ಕೆ ರಾಜ್ಯದ ರೈತ ಸಂಘಟನೆಗಳು ಬೆಂಬಲಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಕೇಂದ್ರದ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿದೆ. ಅವುಗಳನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.


SHARE THIS

Author:

0 التعليقات: