Thursday, 25 March 2021

ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ, ಶೇಕ್ ಹಸೀನಾ ಸ್ವಾಗತ


 ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ, ಶೇಕ್ ಹಸೀನಾ ಸ್ವಾಗತ

ಹೊಸದಿಲ್ಲಿ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಢಾಕಾಗೆ ಭೇಟಿ ನೀಡಿದ್ದು, ಪ್ರಧಾನಿ ಶೇಕ್ ಹಸೀನಾ ಅವರು ಮೋದಿಯವರನ್ನು ವಿಮಾನನಿಲ್ದಾಣದಲ್ಲಿ ಸ್ವಾಗತಿಸಿದರು.

ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ಬಳಿಕ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರವಾಸ ಇದಾಗಿದೆ.

ಮಾರ್ಚ್ 17ರಿಂದ 27ರ ವರೆಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ. 

ಪ್ರಧಾನಿ ಶುಕ್ರವಾರ ಢಾಕಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬಾಂಗ್ಲಾದೇಶ-ಭಾರತದ 50 ವರ್ಷಗಳ ರಾಜತಾಂತ್ರಿಕ ಸಂಬಂಧದ ದ್ಯೋತಕವಾಗಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಪಶ್ಚಿಮಬಂಗಾಳ ಹಾಗೂ ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗಳು  ಮಾ.27ರಿಂದ ಆರಂಭವಾಗಲಿದ್ದು, ಈ ಸಮಯದಲ್ಲಿ ಮೋದಿಯವರು ಎರಡು ದಿನಗಳ ಕಾಲ ಬಾಂಗ್ಲಾ ಪ್ರವಾಸ ಕೈಗೊಂಡಿದ್ದಾರೆ. 


SHARE THIS

Author:

0 التعليقات: