Thursday, 11 March 2021

ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್


 ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ನರೇಂದ್ರ ಮೋದಿ ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. 'ನನ್ನ ತಾಯಿ ಇಂದು ಮೊದಲ ಪ್ರಮಾಣದ ಕೊರೊನಾ ಲಸಿಕೆ ಪಡೆದಿದ್ದಾರೆ, ಈ ಸಂಗತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಿಮ್ಮ ಸುತ್ತಮುತ್ತಲಿರುವ ಜನರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿ' ಎಂದು ಬರೆದುಕೊಂಡಿದ್ದಾರೆ.


SHARE THIS

Author:

0 التعليقات: