Wednesday, 3 March 2021

ತಾಜ್‌ ಮಹಲ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಕರೆ, ಸ್ಥಳದಲ್ಲಿ ಆತಂಕ


 ತಾಜ್‌ ಮಹಲ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಕರೆ, ಸ್ಥಳದಲ್ಲಿ ಆತಂಕ

ನವದೆಹಲಿ: ತಾಜ್‌ ಮಹಲ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಕರೆ ಬಂದ ಹಿನ್ನಲೆಯಲ್ಲಿ, ತಾಜ್‌ ನೋಡಲು ಆಗಮಿಸಿದ್ದ ಪ್ರವಾಸಿಗರನ್ನು ಹೊರಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಗುರುವಾರ ತಾಜ್ ಮಹಲ್ ನೋಡಲು 1,000ಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಸ್ಥಳ ಖಾಲಿ ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ.


SHARE THIS

Author:

0 التعليقات: