Wednesday, 24 March 2021

ವಿಧಾನಸಭೆಯಲ್ಲಿ ಸಿಡಿ ಗದ್ದಲದ ನಡುವೆಯೇ ಬಜೆಟ್ ಮೇಲಿನ ಚರ್ಚೆಗೆ ಸಿಎಂ ಉತ್ತರ

 

ವಿಧಾನಸಭೆಯಲ್ಲಿ ಸಿಡಿ ಗದ್ದಲದ ನಡುವೆಯೇ ಬಜೆಟ್ ಮೇಲಿನ ಚರ್ಚೆಗೆ ಸಿಎಂ ಉತ್ತರ

ಬೆಂಗಳೂರು: ವಿಧಾನಸಭೆಯಲ್ಲಿ ಸಿಡಿ ರಾದ್ಧಾಂತ ಮುಂದುವರೆದಿದ್ದು, ಇದರ ನಡುವೆಯೇ ಸಿಎಂ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು.ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಮುಂದಿನ ಬಾವಿಗಿಳಿದು ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ದಿಕ್ಕಾರ ಘೋಷಣೆಗಳನ್ನು ಕೂಗುತ್ತಿದ್ದರೆ, ಅತ್ತ ಆಡಳಿತ ಪಕ್ಷದ ಶಾಸಕರು ತಿರುಗೇಟು ನೀಡುತ್ತಿದ್ದರು.

ಇದರ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಕಲಾಪದ ಪವಿತ್ರ ಸಮಯವನ್ನು ಹಾಳು ಮಾಡದೆ ಜನರ ತೆರಿಗೆ ಹಣವನ್ನು ಪೋಲು ಮಾಡುವುದು ಸರಿಯಲ್ಲ.

ದಯ ಮಾಡಿ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದರು. ಇದಕ್ಕೆ ಸಹಕರಿಸದಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್ ಚರ್ಚೆಗೆ ಉತ್ತರ ನೀಡಲು ಆರಂಭಿಸಿ ಎಲ್ಲರನ್ನು ಚಕಿತಗೊಳಿಸಿದರು.


SHARE THIS

Author:

0 التعليقات: