Tuesday, 2 March 2021

ನಾಯಕರ ವಿರುದ್ಧ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ: ಡಿಕೆಶಿ


ನಾಯಕರ ವಿರುದ್ಧ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ: ಡಿಕೆಶಿ

ಬೆಂಗಳೂರು: ನಾಯಕರ ವಿರುದ್ಧ ಯಾರೂ ಬಹಿರಂಗವಾಗಿ ಮಾತನಾಡಬಾರದು. ಭಿನ್ನಾಭಿಪ್ರಾಯಗಳು ಏನೇ ಇದ್ರೂ ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಅದನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇನೆ ಎಂದು ಡಿ.ಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಅಖಂಡ ಶ್ರೀನಿವಾಸ್ ಅವರು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹೈಕಮಾಂಡ್​ʼಗೆ ದೂರು ನೀಡುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ ಅಖಂಡ ಶ್ರೀನಿವಾಸ್ ಮೂರ್ತಿ ಇರಲಿ, ಯಾರೇ ಇರಲಿ, ಯಾವ ನಾಯಕರ ವಿರುದ್ಧವೂ ಯಾರೂ ಬಹಿರಂಗವಾಗಿ ಮಾತನಾಡಬಾರದು. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಅದನ್ನು ಉಲ್ಲಂಘಿಸಿದರೆ ಶಿಸ್ತುಕ್ರಮ ಕೈಗೊಳ್ತೇನೆ ಎಂದಿದ್ದಾರೆ.SHARE THIS

Author:

0 التعليقات: