ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಲಸಿಕೆ : ಸಚಿವ ಡಾ.ಕೆ ಸುಧಾಕರ್
ಬೆಂಗಳೂರು : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಶೀಘ್ರದಲ್ಲೇ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೆಚ್ಚು ಜನರು ಕೊರೊನಾ ಲಸಿಕೆ ಪಡೆಯಲು ಅನುಕೂಲವಾಗುವಂತೆ, ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಆಧಾರದಲ್ಲಿ ಕೋವಿಡ್ ಪಿಎಚ್ ಸಿ ಮತ್ತು ಸಿಎಸ್ ಸಿಗಳಲ್ಲೂ ಕೋವಿಡ್ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
0 التعليقات: