ರಮೇಶ್ ಜಾರಕಿಹೊಳಿ 'ಸಿಡಿ ಕೇಸ್' ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ತನಿಖೆಗೆ ಸಂಬಂಧಪಟ್ಟಂತೆ ಶೀಘ್ರದಲ್ಲಿ ಗೃಹ ಇಲಾಖೆಯಿಂದ ಘೋಷಣೆಯಾಗಲಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಮಾಹಿತಿ ನೀಡಿದರು, ಇದೇ ವೇಳೆ ಅವರು ತಮ್ಮ ಮಾತಿನಲ್ಲಿ ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಂಡು ಇನ್ನೇನು ಕೆಲವೇ ದಿನದಲ್ಲಿ ತಿಳಿಸಲಿದ್ದು, ಕಾದು ನೋಡುವಂತೆ ಹೇಳಿದ್ದಾರೆ.
ಒಟ್ಟಿನಲ್ಲಿ ಶಾಸಕ ರಮೇಶ್ ಅವರ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಾರಕಿಹೊಳಿ ಸಹೋದರರು ಕೂಡ ಸರ್ಕಾರವನ್ನು ಒತ್ತಾಯಿಸಿದ್ದರು.
0 التعليقات: