Tuesday, 16 March 2021

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ಯಾಂಕ್ ಮುಚ್ಚಲಾಗುವುದು, ನಿಮ್ಮ ಹಕ್ಕುಗಳನ್ನು ಕಳೆದುಕೊಳ್ಳುವಿರಿ : ಮಮತಾ ಬ್ಯಾನರ್ಜಿ


 ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ಯಾಂಕ್ ಮುಚ್ಚಲಾಗುವುದು, ನಿಮ್ಮ ಹಕ್ಕುಗಳನ್ನು ಕಳೆದುಕೊಳ್ಳುವಿರಿ : ಮಮತಾ ಬ್ಯಾನರ್ಜಿ

ಕೊಲ್ಕತ್ತಾ : ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.

ಬಂಗೂರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ ಎಲ್ಲ ಹಕ್ಕುಗಳನ್ನು ನೀವು ಕಳೆದುಕೊಳ್ಳುತ್ತೀರಿ, ಎಲ್ಲ ಬ್ಯಾಂಕ್ ಗಳು ಮುಚ್ಚಲಿವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಳದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಕೇಂದ್ರ ಸಚಿವರು ಕೇಂದ್ರ ಸರ್ಕಾರದ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಟಿಎಂಸಿ ನಾಯಕಿ ಆರೋಪಿಸಿದ್ದಾರೆ.

'ಕೋಲ್ಕತ್ತಾದಲ್ಲಿ ಕೇಂದ್ರ ಸಚಿವರು ನಾಚಿಕೆಯಿಲ್ಲದೆ ಕುಳಿತಿರುತ್ತಾರೆ. ಅವರು ಕೋವಿಡ್ ಬಿಕ್ಕಟ್ಟು ಅಥವಾ ಆಂಫಾನ್ ಚಂಡಮಾರುತದ ಸಮಯದಲ್ಲಿ ಬರಲಿಲ್ಲ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಹೇಳಿದ್ದಾರೆ. ಪಿಎಂ ಮೋದಿ ಅವರು ದೇಶಾದ್ಯಂತ ಎಲ್ಲ ಕಾರ್ಖಾನೆಗಳನ್ನು ಮುಚ್ಚಿದ್ದಾರೆ ಎಂದು ಅವರು ಆರೋಪಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರ್ಕಾರ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.


SHARE THIS

Author:

0 التعليقات: