Tuesday, 16 March 2021

ಕೋವಿಡ್ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ.ಕೆ.ಸುಧಾಕರ್

 

ಕೋವಿಡ್ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದನ್ನು ಪಾಲಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಅಂತ ಮುಖ್ಯಮಂತ್ರಿ ಈಗಾಗಲೇ ಜನತೆಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ಲಸಿಕೆ ನೀಡಿದ್ದೇವೆ. ಪ್ರತೀ ದಿನ ಪ್ರಾಥಮಿಕ ಸರಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇ ಬೇಕು ಎಂದು ಸುಧಾಕರ್ ಹೇಳಿದರು.

ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಜಿಲ್ಲೆಗಳಲ್ಲಿ ಕೊರೋನ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಪ್ರತಿಭಟನೆ, ಸಿನಿಮಾ ಹಾಲ್ ಗಳಿಗೆ ಕಠಿಣ ನಿಯಮ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಳೆ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದರು.


SHARE THIS

Author:

0 التعليقات: