Friday, 19 March 2021

ಮಂಗಳೂರು ಖಾಝಿ ಆರೋಗ್ಯ ವಿಚಾರಿಸಿದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್‌

 

ಮಂಗಳೂರು ಖಾಝಿ ಆರೋಗ್ಯ ವಿಚಾರಿಸಿದ
ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್‌

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರನ್ನು ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಶುಕ್ರವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ, ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಶುಕ್ರವಾರ ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರವರನ್ನು ಭೇಟಿಯಾಗಿ ದುಆ ಮಾಡಿದರು.

ದುಆ ಮಾಡಲು ಮಾಣಿ ಉಸ್ತಾದ್ ಮನವಿ

ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಆರೋಗ್ಯಕ್ಕಾಗಿ ಜುಮಾ ನಮಾಝ್ ಬಳಿಕ ಎಲ್ಲಾ ಇಮಾಮ್(ಖತೀಬ್)ಗಳು ದುಆ ಮಾಡುವಂತೆ ಉಡುಪಿ-ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಖಾಝಿ ಮಾಣಿ ಉಸ್ತಾದ್ ಮನವಿ ಮಾಡಿದ್ದಾರೆ.



SHARE THIS

Author:

0 التعليقات: