Wednesday, 3 March 2021

ವಿಶ್ವ ವನ್ಯಜೀವಿ ದಿನ: ಅರಣ್ಯ, ಪ್ರಾಣಿ ರಕ್ಷಣೆಗಳ ಪ್ರಯತ್ನ ನಿರಂತರವಾಗಿ ನಡೆಯಬೇಕು: ಪ್ರಧಾನಿ ಮೋದಿ

 

ವಿಶ್ವ ವನ್ಯಜೀವಿ ದಿನ: ಅರಣ್ಯ, ಪ್ರಾಣಿ ರಕ್ಷಣೆಗಳ ಪ್ರಯತ್ನ ನಿರಂತರವಾಗಿ ನಡೆಯಬೇಕು: ಪ್ರಧಾನಿ ಮೋದಿ

ನವದೆಹಲಿ: ಅರಣ್ಯ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸ್ಥಾನ ಕಲ್ಪಿಸಿಕೊಡುವಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋಗಿಯವರು ಬುಧವಾರ ಹೇಳಿದ್ದಾರೆ.

ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳು, ವಿವಿಧ ಪ್ರಾಣಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಸಂರಕ್ಷಣೆಗಾಗಿ ಕೆಲಸ ಮಾಡುವ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಹುಲಿ, ಸಿಂಹ, ಚಿರತೆ ಸೇರಿದಂತೆ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾಧ್ಯವಿರುವಲ್ಲೆಲ್ಲಾ ಅರಣ್ಯಗಳ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸಸ್ಥಾನಗಳನ್ನು ಕಲ್ಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.


SHARE THIS

Author:

0 التعليقات: