Friday, 19 March 2021

ಮಂಗಳೂರು ಏರ್‌ಪೋರ್ಟ್‌ನಲ್ಲಿ ಚಿನ್ನ ಅಕ್ರಮ ಸಾಗಾಟ: ಆರೋಪಿ ಸೆರೆ


 ಮಂಗಳೂರು ಏರ್‌ಪೋರ್ಟ್‌ನಲ್ಲಿ ಚಿನ್ನ ಅಕ್ರಮ ಸಾಗಾಟ: ಆರೋಪಿ ಸೆರೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಅಕ್ರಮ ಸಾಗಾಟ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಮೂಲದ ವಿನೇಶ್ ರಾಜು ಅಡ್ವಾಣಿ ಬಂಧಿತ ಆರೋಪಿ. ಈತನಿಂದ 13,16,238 ರೂ. ಮೌಲ್ಯದ 284 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈತ ದುಬೈಯಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ ಚಿನ್ನವನ್ನು ಪುಡಿ ಮಾಡಿ ಅಂಟಿನೊಂದಿಗೆ ಮಿಕ್ಸ್ ಮಾಡಿ ಗುದದ್ವಾರದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು. ಜತೆಗೆ ರಿಂಗ್, ಕಡಗ, ಅಂಗಿಯ ಗುಂಡಿ, ಲೇಬಲ್ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


SHARE THIS

Author:

0 التعليقات: