Friday, 5 March 2021

ರಾಸಲೀಲೆ ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ


 ರಾಸಲೀಲೆ ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ 

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ಸೂಚಿಸಿದ ಹಿನ್ನೆಲೆಯಲ್ಲಿ ಇಂದು ವಕೀಲರ ಜೊತೆಗೆ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಿದ್ದು, ಅಗತ್ಯ ಮಾಹಿತಿಗಳನ್ನು ನೀಡಿದ್ದಾರೆ.

ಈ ವೇಳೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಪ್ರಕರಣದ ಇಂಚಿಂಚು ಮಾಹಿತಿಯನ್ನು ಪೊಲೀಸರಿಗೆ ತಿಳಿಸುತ್ತೇನೆ. ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ತಂದಿದ್ದು, ಸಿಡಿ ಪ್ರಕರಣದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಲಿ ಎಂದರು. ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಯಾರು ಬ್ಲಾಕ್ ಮೇಲ್ ಮಾಡುತ್ತಿದ್ದಾರೋ ಅವರನ್ನು ಬಂಧಿಸಲಿ ಎಂದು ಹೇಳಿದ್ದಾರೆ.


SHARE THIS

Author:

0 التعليقات: