Thursday, 25 March 2021

ಹೊರರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಕಡ್ಡಾಯ: ಸಚಿವ ಡಾ.ಸುಧಾಕರ್


ಹೊರರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಕಡ್ಡಾಯ: ಸಚಿವ ಡಾ.ಸುಧಾಕರ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊರ ರಾಜ್ಯದಿಂದ ಬೆಂಗಳೂರು ನಗರಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷಾ ಪ್ರಮಾಣ ಪತ್ರವನ್ನು ಹೊಂದಿರಬೇಕೆಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಬಿಬಿಎಂಪಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 1,400 ಸೋಂಕಿತರ ಪತ್ತೆಯಾಗಿದ್ದಾರೆ. ಕಳೆದ 4 ತಿಂಗಳಲ್ಲಿ ನಿನ್ನೆ(ಬುಧವಾರ) ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ತಿಳಿಸಿದ್ದಾರೆ.

ನಾಳೆಯಿಂದಲೇ ಸೋಂಕಿತರ ಕೈ ಮೇಲೆ ಸೀಲ್ ಹಾಲುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಆರೋಗ್ಯಾಧಿಕಾರಿಗಳ ಮಾಹಿತಿಯ ಪ್ರಕಾರ ಶೇ.60ರಷ್ಟು ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಲ್ಲಿಯೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆ ಕಡ್ಡಾಯ. ಕೇವಲ ಬೆಂಗಳೂರಿಗೆ ಮಾತ್ರ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ವಿವರಿಸಿದ್ದಾರೆ.

-ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 250 ರೂ. ಹಾಗೂ ಇತರೆ ಪ್ರದೇಶಗಳಲ್ಲಿ 100 ರೂ.ದಂಡ ವಿಧಿಸಲಾಗುವುದು

-ಮಾರುಕಟ್ಟೆ, ಚಿತ್ರಮಂದಿರ, ಶಾಪಿಂಗ್ ಮಾಲ್, ಶಾಲಾ ಕಾಲೇಜು ಆವರಣ, ಮದುವೆ ಸಮಾರಂಭಗಳು ಸೇರಿದಂತೆ ಎಲ್ಲಾ ಹೆಚ್ಚು ಜನರು ಸೇರುವ ಕಡೆಗಳಲ್ಲಿ ಕೋವಿಡ್ ಮಾರ್ಗ ಸೂಚಿ ಉಲ್ಲಂಘನೆ ಮಾಡಿದರೆ ಕಡ್ಡಾಯ ದಂಡ ವಸೂಲಿಗೆ ಸೂಚಿಸಲಾಗಿದ್ದು, ಮುಖ್ಯವಾಗಿ ಆಯೋಜಕರಿಗೆ 5 ಸಾವಿರ ರೂ. ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೊಟೇಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10 ಸಾವಿರ ರೂ. ದಂಡ ವಿಧಿಸಲಾಗುವುದು.SHARE THIS

Author:

0 التعليقات: