Wednesday, 17 March 2021

ಗುಂಡಿನ ದಾಳಿಗೆ ಒಳಗಾಗಿದ್ದ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಮೃತ್ಯು


 ಗುಂಡಿನ ದಾಳಿಗೆ ಒಳಗಾಗಿದ್ದ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಮೃತ್ಯು

ಚತಾರ್ ಪುರ(ಮಧ್ಯಪ್ರದೇಶ): ಚತಾರ್ ಪುರದ ಮಲ್ಹರಾದಲ್ಲಿ ಮಂಗಳವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಇಂದ್ರ ಪ್ರತಾಪ್ ಸಿಂಗ್ ಪರ್ಮಾರ್ ಅವರು ಆಸ್ಪತ್ರೆಯಲ್ಲಿ ನಿಧನರಾದರು.

ಇಂದ್ರ ಪ್ರತಾಪ್ ಅವರಿಗೆ ಗುಂಡು ಹಾರಿಸಲಾಗಿತ್ತು. ನಂತರ ಅವರನ್ನು ಚತಾರ್ ಪುರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೋಕೇಂದ್ರ ಸಿಂಗ್ ಹೇಳಿದ್ದಾರೆ.


SHARE THIS

Author:

0 التعليقات: