Sunday, 21 March 2021

ವೃದ್ಧನನ್ನು ಗುಂಡಿಕ್ಕಿ ಕೊಲೆಗೈದ ಪ್ರಕರಣ | ಬಿಜೆಪಿ ಮುಖಂಡ ಸೇರಿದಂತೆ ಮೂವರ ಬಂಧನ


ವೃದ್ಧನನ್ನು ಗುಂಡಿಕ್ಕಿ ಕೊಲೆಗೈದ ಪ್ರಕರಣ | ಬಿಜೆಪಿ ಮುಖಂಡ ಸೇರಿದಂತೆ ಮೂವರ ಬಂಧನ

ಬರ್ಧಮಾನ್: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ 74 ವರ್ಷದ ವೃದ್ಧನನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿ ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

ಮಾರ್ಚ್ 9 ರಂದು ರೈನಾ ಪೊಲೀಸ್ ಠಾಣಾ ವ್ಯಾಪ್ತಿಯ ಪೋಸ್ಟ್ ಆಫೀಸ್ ಹತ್ತಿರದ ಮನೆಯೊಂದರಲ್ಲಿ ವೃದ್ಧರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಘಟನೆ ನಡೆದ ದಿನದಂದು ವೃದ್ಧ ತನ್ನ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆದಿದ್ದರು ಎನ್ನಲಾಗಿದೆ. ಕೊಲೆ ಹಿಂದಿನ ಉದ್ದೇಶ ಹಣ ದೋಚುವುದಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಮೊಬೈಲ್ ಫೋನ್ ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಬರ್ಧಮಾನ್ ಉತ್ತರ ವಿಧಾನಸಭಾ ಕ್ಷೇತ್ರದ ‘ಶಕ್ತಿ ಕೇಂದ್ರ ಪ್ರಮುಖ್’ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.


 


SHARE THIS

Author:

0 التعليقات: