Wednesday, 3 March 2021

ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ


 ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಬುಧವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ರವಾನಿಸಿರುವ ರಮೇಶ್ ಜಾರಕಿಹೊಳಿ, ತನ್ನ ಮೇಲಿನ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಇದರ ಬಗ್ಗೆ ಶೀಘ್ರದಲ್ಲೇ ತನಿಖೆ ಆಗಬೇಕು. ತಾನು ನಿರ್ದೋಷಿ ಆಗುವ ವಿಶ್ವಾಸವಿದ್ದರೂ ನೈತಿಕ ಹೊಣೆ ಹೊತ್ತು ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.


SHARE THIS

Author:

0 التعليقات: