ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಸಿಎಂ ಜೊತೆ ಚರ್ಚೆ ಬಳಿಕ ಶಾಲಾ-ಕಾಲೇಜು ಭವಿಷ್ಯ : ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಗಮನ ಕೊಡಬೇಕಾಗುತ್ತದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ
ಕೊರೊನಾ ಹೆಚ್ಚಾದರೆ ಸರ್ಕಾರದಿಂದ ನಿಯಂತ್ರಣ ಸಾಧ್ಯವಿಲ್ಲ. ನಿಯಮಗಳನ್ನು ಪಾಲಿಸದಿದ್ದರೆ ಆಪತ್ತು ಕಾದಿದೆ. ಸರ್ಕಾರ ಲಸಿಕೆ ನೀಡಬಹುದು. ಆದರೆ ಜನರು ಕೋವಿಡ್ ನಿಯಮಗಳನ್ನು ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು. ಕೋವಿಡ್ ನಿಯಮಗಳನ್ನು ಪಾಲಿಸಿ ನೀವು ಸುರಕ್ಷಿತವಾಗಿ, ಹಿರಿಯ ನಾಗರಿಕರಿಗೆ ಲಸಿಕೆ ಕೊಡುವ ಕೆಲಸ ಮಾಡಿ, ಪಾರ್ಟಿ, ಜಾತ್ರೆ ಎಂದು ರಿಯಾಯಿತಿ ನೀಡಲ್ಲ. ಯುವಕರು ಅನಗತ್ಯ ಚಟುವಟಿಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
0 التعليقات: