Wednesday, 10 March 2021

ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪತ್ತೆ


ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪತ್ತೆ

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಕೊರೊನಾ ವೈರಸ್ ಬೆನ್ನಲ್ಲೇ ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪ್ರಕರಣವೊಂದು ದೃಢಪಟ್ಟಿದೆ.

ಫೆಬ್ರವರಿ 21 ರಂದು ದುಬೈನಿಂದ ಶಿವಮೊಗ್ಗಕ್ಕೆ ಹಿಂದಿರುಗಿದ್ದ 58 ವರ್ಷದ ವ್ಯಕ್ತಿಯೊಬ್ಬರಿಗೆ ರೂಪಾಂತರ ಕೊರೊನಾ ವೈರಸ್ ತಗುಲಿದೆ. 18 ದಿನ ನಂತರ ಬುಧವಾರ ರಾತ್ರಿ ಸೋಂಕು ಪರೀಕ್ಷಾ ವರದಿ ಬಂದಿದ್ದು, ದಕ್ಷಿಣ ಆಫ್ರಿಕಾ ರೂಪಾಂತರ ಎಂದು ತಿಳಿದುಬಂದಿದೆ.

ಯಾವುದೇ ಸೋಂಕು ಲಕ್ಷಣ ಇಲ್ಲ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಯು ಸೋಂಕಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.


SHARE THIS

Author:

0 التعليقات: