ಪಶ್ಚಿಮ ಬಂಗಾಳ, ಅಸ್ಸಾಂ ವಿಧಾನಸಭಾ ಚುನಾವಣೆ : ಇಂದು ಮೊದಲ ಹಂತದ ಮತದಾನ
ಕೋಲ್ಕತ್ತಾ : ದೇಶದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದೆ.
ಪಶ್ಚಿಮ ಬಂಗಾಳದ 30 ಹಾಗೂ ಅಸ್ಸಾಂನ 47 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದ 30 ಕ್ಷೇತ್ರಗಳ ಪೈಕಿ 27 ರಲ್ಲಿ ಪ್ರಸಕ್ತ ಟಿಎಂಸಿ ಶಾಸಕರು ಇದ್ದಾರೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಆರ್ ಎಸ್ ಪಿ ಶಾಸಕರಿದ್ದಾರೆ. ಟಿಎಂಸಿ ಮತ್ತು ಬಿಜೆಪಿ ತಲಾ 29 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎಡ-ಕಾಂಗ್ರೆಸ್-ಐಎಸ್ ಎಫ್ ಮೈತ್ರಿಕೂಟ ಎಲ್ಲ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.
ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೂರ್ವ ರಾಜ್ಯಗಳಲ್ಲಿ 1.54 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಪ್ರಮುಖ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ.
0 التعليقات: