ಬಾಗಲಕೋಟೆ : ಮಹಾರಾಷ್ಟ್ರಕ್ಕೆ ಕನ್ಯೆ ನೋಡಲು ಹೋದವರಿಗೆ ಕೊರೊನಾ ಸೋಂಕು
ಬಾಗಲಕೋಟೆ : ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಮತ್ತೆ ಶುರುವಾಗಿದ್ದು, ಮಹಾರಾಷ್ಟ್ರಕ್ಕೆ ಮದುವೆಗಾಗಿ ಹುಡುಗಿ ನೋಡಲು ಹೋಗಿ ಬಂದವರ ಪೈಕಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ನಾಲ್ಕು ದಿನಗಳ ಹಿಂದೆ ಮಹಾರಾಷ್ಟ್ರಕ್ಕೆ ಹುಡುಗಿಯನ್ನು ನೋಡಲು 60 ಮತ್ತು 50 ವರ್ಷದ ಪುರುಷರಿಬ್ಬರು ಹೋಗಿದ್ದರು. ವಾಪಸ್ ಬರುವ ವೇಳೆ ರಾಜ್ಯದ ಗಡಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿದ್ದು, ಇಬ್ಬರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಸದ್ಯ ಇಬ್ಬರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಇಬ್ಬರ ಸಂಪರ್ಕದಲ್ಲಿದ್ದ 400 ಜನರ ಗಂಟಲು ದ್ರವ ಪರೀಕ್ಷೆಯನ್ನು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
0 التعليقات: