Friday, 5 March 2021

ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ: ಕರ್ನಾಟಕ ಕಾಂಗ್ರೆಸ್


 ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ: ಕರ್ನಾಟಕ ಕಾಂಗ್ರೆಸ್

ಬೆಂಗಳೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತ್ರ, ರಾಜಕೀಯ ಷಡ್ಯಂತ್ರದ ಮೂಲಕ ತಮ್ಮ ರಾಜಕೀಯ ತೇಜೋವಧೆ ಮಾಡುವಂತ ಹುನ್ನಾರ ನಡೆದಿದೆ ಎಂಬುದಾಗಿ ಆರೋಪಿಸಿರುವಂತ ರಾಜ್ಯ 6 ಸಚಿವರು ತಮ್ಮ ವಿರುದ್ಧದ ಸುದ್ದಿ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೋ ಹೋಗಿದ್ದಾರೆ. ಇದರ ಮಧ್ಯೆ ಸಿಡಿ ಶಬ್ದ ಕೇಳಿದ್ರೇ ಸಾಕು ರಾಜ್ಯ ಬಿಜೆಪಿ ನೇತೃತ್ವದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿ ಕಾರಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕ ಬಿಜೆಪಿಯ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ? ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ? 6 ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ? ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ ಎಂದು ಕಿಡಿ ಕಾರಿದೆ.


SHARE THIS

Author:

0 التعليقات: