Wednesday, 10 March 2021

ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಸಿ.ಚಾಕೊ ರಾಜೀನಾಮೆ

 

ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಸಿ.ಚಾಕೊ ರಾಜೀನಾಮೆ

ತಿರುವನಂತಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಸಿ.ಚಾಕೊ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. 

ತಾನು ಪಕ್ಷವನ್ನು ತ್ಯಜಿಸುತ್ತಿದ್ದು, ರಾಜೀನಾಮೆ ಪತ್ರವನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿಕೊಟ್ಟಿದ್ದಾಗಿ ಚಾಕೊ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.

ಚಾಕೊ ರಾಜೀನಾಮೆ ನೀಡಿರುವುದು ಎಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್‍ಗೆ ಹಿನ್ನಡೆಯಾಗಿ ಪರಿಣಮಿಸಿದೆ.

ಪಕ್ಷದೊಳಗೆ ಗುಂಪುಗಾರಿಕೆ ಇದೆ ಎಂದು ಆರೋಪಿಸಿದ ಚಾಕೊ, ಪಕ್ಷದಲ್ಲಿ “ಪ್ರಜಾಪ್ರಭುತ್ವ’’ ಇಲ್ಲವಾಗಿದೆ ಎಂದು ಹೇಳಿದ್ದಾರೆ.

74ರ ಹರೆಯದ ಚಾಕೊ ಕಾಂಗ್ರೆಸ್‍ನ ವಕ್ತಾರರಾಗಿ ಚಿರಪರಿಚಿತರಾಗಿದ್ದು, ಕೇರಳದ ತ್ರಿಶೂರ್ ನ ಮಾಜಿ ಸಂಸದರಾಗಿದ್ದಾರೆ.

ಎ.6ರಂದು ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ವೇಳೆ ತನ್ನ ಪಕ್ಷವು ರಾಜ್ಯ ನಾಯಕರನ್ನು ನಿರ್ಲಕ್ಷಿಸುತ್ತಿದೆ. ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವವಿಲ್ಲ. ರಾಜ್ಯ ಕಾಂಗ್ರೆಸ್ ಸಮಿತಿಯಲ್ಲಿ ಅಭ್ಯರ್ಥಿಗಳ ಪಟ್ಟಿಯ ಕುರಿತಾಗಿ ಚರ್ಚೆ ನಡೆದಿಲ್ಲ. ನಾನು ನನ್ನ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ಕಳುಹಿಸಿಕೊಟ್ಟಿದ್ದೇನೆ ಎಂದು ಚಾಕೊ ಹೇಳಿದ್ದಾರೆ.


SHARE THIS

Author:

0 التعليقات: