Sunday, 14 March 2021

ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮಾರಾಟಕ್ಕೆ ಕೇಂದ್ರ ಸರ್ಕಾರ ಸಿದ್ಧತೆ


ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮಾರಾಟಕ್ಕೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಬೆಂಗಳೂರು, ಮುಂಬೈ, ದೆಹಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ಈಗಾಗಲೇ ಖಾಸಗಿ ಕಂಪನಿಗಳು ನಿರ್ವಹಣೆ ಮಾಡುತ್ತಿದ್ದು, ತನ್ನ ಎಲ್ಲ ಷೇರನ್ನೂ ಅವುಗಳಿಗೆ ಮಾರಾಟ ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ಮುಂದಾಗಿದೆ.

2022 ರಲ್ಲಿ ಆಸ್ತಿಗಳ ಮಾರಾಟದ ಮೂಲಕ 20 ಸಾವಿರ ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿಯನ್ನು ಸಚಿವಾಲಯ ಹೊಂದಿದೆ. ಇದಕ್ಕೆ ಪೂರಕವಾಗಿ ವಿಮಾನ ನಿಲ್ದಾಣಗಳ ಷೇರು ವಿಲೇವಾರಿ ನಡೆಯಲಿದೆ. ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣವನ್ನು ಈಗಾಗಲೇ ಅದಾನಿ ಗ್ರೂಪ್ ಗೆ ಹಸ್ತಾಂತರ ಮಾಡಲಾಗಿದೆ.


SHARE THIS

Author:

0 التعليقات: