Thursday, 11 March 2021

ಲಸಿಕೆ ಹಾಕಿಸಿಕೊಂಡರೂ ತಗುಲಿದ ಕೊರೊನಾ ಸೋಂಕು: ನಿರ್ಲಕ್ಷ್ಯ ಬೇಡವೆಂದ ತಜ್ಞರು


 ಲಸಿಕೆ ಹಾಕಿಸಿಕೊಂಡರೂ ತಗುಲಿದ ಕೊರೊನಾ ಸೋಂಕು: ನಿರ್ಲಕ್ಷ್ಯ ಬೇಡವೆಂದ ತಜ್ಞರು

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈವರೆಗೆ 2.5 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡ ನಂತ್ರ ಕೊರೊನಾ ಸೋಂಕು ಬರುವುದಿಲ್ಲ ಎಂಬ ಮಾತು ಮತ್ತೆ ಸುಳ್ಳಾಗಿದೆ. ಮಹಾರಾಷ್ಟ್ರದಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆಯ ಎರಡು ಡೋಸ್ ಹಾಕಿದ ನಂತ್ರವೂ ಕೊರೊನಾ ಕಾಣಿಸಿಕೊಂಡಿದೆ.

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಎರಡು ಡೋಸ್ ಹಾಕಿಸಿಕೊಂಡ ನಂತ್ರವೂ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡ ನಂತ್ರ ಪ್ರತಿಕಾಯ ಅಭಿವೃದ್ಧಿಯಾಗುತ್ತದೆ. ಈ ವೇಳೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ. ನಿರ್ಲಕ್ಷ್ಯ ಮಾಡಿದ್ರೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಕೊರೊನಾ ಲಸಿಕೆಯ ಮೊದಲ ಡೋಸ್ ಹಾಕಲಾಗಿತ್ತು. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಿದ್ದು, ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ.


SHARE THIS

Author:

0 التعليقات: