Friday, 26 March 2021

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್


 ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಕೇದಾರ್ ಜಾಧವ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೇದಾರ್ ಜಾಧವ್ 2014 ನವೆಂಬರ್ 16ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡದಲ್ಲಿದ್ದ ಕೇದಾರ್ ಜಾಧವ್ ಅವರನ್ನು ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಮ್ಮ ತಂಡಕ್ಕೆ ಕರೆದುಕೊಂಡಿದೆ.

ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಕೇದರ್ ಜಾಧವ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಹಲವಾರು ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಕೇದಾರ್ ಜಾಧವ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.


SHARE THIS

Author:

0 التعليقات: