Wednesday, 24 March 2021

ರಾಜ್ಯ ಬಿಜೆಪಿ ಸರ್ಕಾರ ಕುತಂತ್ರದಿಂದ ಅಧಿಕಾರಕ್ಕೆ ಬಂದಿದೆ : ಮಾಜಿ ಸಿ.ಎಂ ಕುಮಾರಸ್ವಾಮಿ ವಾಗ್ದಾಳಿ


 ರಾಜ್ಯ ಬಿಜೆಪಿ ಸರ್ಕಾರ ಕುತಂತ್ರದಿಂದ ಅಧಿಕಾರಕ್ಕೆ ಬಂದಿದೆ : ಮಾಜಿ ಸಿ.ಎಂ ಕುಮಾರಸ್ವಾಮಿ ವಾಗ್ದಾಳಿ

ಕಲಬುರಗಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕುತಂತ್ರದಿಂದ ಬಂದಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರ ನಡೆಸಲು ಬರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ಅಧಿಕಾರ ನಡೆಸಲು ಕೇಂದ್ರದವರು ಬಿಟ್ಟಿಲ್ಲ. ಹೀಗಾಗಿ ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ. ಕೇಂದ್ರದಿಂದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗಾಗಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಯಾವುದೇ ಗುಣಾತ್ಮಕ ಕಾರ್ಯಕ್ರಮಕ್ಕೆ ಚಾಲನೆ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.


SHARE THIS

Author:

0 التعليقات: