ಹಾವೇರಿ: ಇದೀಗ ಮತ್ತಿಬ್ಬರ ಭೀಕರ ಕೊಲೆ
ಹಾವೇರಿ: ಹಾವೇರಿಯಲ್ಲಿ ಜೋಡಿ ಕೊಲೆಯಾಗಿದ್ದು, ಜನತೆ ಮತ್ತೆ ಬೆಚ್ಚಿಬಿದ್ದಿದ್ದಾರೆ. ಇತ್ತೀಚೆಗೆ ನಗರದಲ್ಲಿ 11 ವರ್ಷದ ಬಾಲಕನ ಕೊಲೆಯಾಗಿತ್ತು. ಇದೀಗ ಮತ್ತಿಬ್ಬರನ್ನು ಭೀಕರವಾಗಿ ಕೊಲ್ಲಲಾಗಿದೆ.
ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಮನೆಯಲ್ಲಿ ಮಂಗಳವಾರ ರಾತ್ರಿ ಜೋಡಿ ಕೊಲೆಯಾಗಿದ್ದು, ಬುಧವಾರ ಬೆಳಕಿಗೆ ಬಂದಿದೆ. ಕೊಲೆಯಾದವರನ್ನು ನಿಂಗಪ್ಪ ಬೆಣ್ಣೆಪ್ಪ ಶಿರಗುಪ್ಪಿ(30) ಹಾಗೂ ಗಣೇಶ ದಿನೇಶ ಕುಂದಾಪುರ(16) ಎಂದು ತಿಳಿದುಬಂದಿದೆ.
ನಿಂಗಪ್ಪ ಬೆಣ್ಣೆಪ್ಪ ಶಿರಗುಪ್ಪಿ ಹಾಗೂ ಗಣೇಶ ದಿನೇಶ ಕುಂದಾಪುರ ಇಬ್ಬರೂ ಮನೆಯಲ್ಲಿ ಮಲಗಿದ್ದರು. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಳು. ಘಟನಾ ಸ್ಥಳಕ್ಕೆ ಹಾವೇರಿ ಶಹರ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಹಳೇ ದ್ವೇಷದ ಶಂಕೆ ವ್ಯಕ್ತವಾಗಿದೆ.
0 التعليقات: