Friday, 19 March 2021

`CD' ಪ್ರಕರಣ :ಮಾಜಿ ಸಚಿವ 'ರಮೇಶ್ ಜಾರಕಿಹೊಳಿ' ವಿಚಾರಣೆ


`CD' ಪ್ರಕರಣ :ಮಾಜಿ ಸಚಿವ 'ರಮೇಶ್ ಜಾರಕಿಹೊಳಿ' ವಿಚಾರಣೆ

ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿಂತೆ ಎಸ್ ಐ ಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಶುಕ್ರವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಟೆಕ್ನಿಕಲ್ ವಿಂಗ್ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ರಮೇಶ್ ಜಾರಕಿಹೊಳಿಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿದೆ.ಎಸ್ ಐಟಿ ಕೇಳಿದ ಪ್ರಶ್ನೆಗೆ ಕೂಡ ರಮೇಶ್ ಜಾರಕಿಹೊಳಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಮೊದಲೇ ವಿಚಾರಣೆಗೆ ಎಲ್ಲಾ ತಯಾರಿ ನಡೆಸಿದ್ದ ಎಸ್ ಐ ಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳು ನೋಟಿಸ್ ನೀಡಿದ್ದಕ್ಕೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐ ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಹಲವು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಬಗ್ಗೆ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಸಿಡಿ ಪ್ರಕರಣದಲ್ಲಿ ಮಾಜಿ ಸಚಿವರು ಇದ್ದಾರೆ ಅಂತ ಆರೋಪಿಸಲಾಗುತ್ತಿದ್ದು, ಎಸ್ ಐ ಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



SHARE THIS

Author:

0 التعليقات: