Tuesday, 13 April 2021

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ನಾಳೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ

ಮುಂಬೈ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ನಾಳೆ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಉದ್ದವ್ ಠಾಕ್ರೆ ತಿಳಿಸಿದರು.

ಕೋವಿಡ್ ಗೆ ನೆರವಾಗಲು ಬಯಸುತ್ತಾರಾ ಅಥವಾ ಸೋಂಕು ನಿಯಂತ್ರಿಸಲು ಕೆಲಸ ನಿರ್ವಹಿಸುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸುತ್ತಾರಾ ಎಂಬುದನ್ನು ಜನರು ನಿರ್ಧರಿಸಬೇಕಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂಬೈ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ನಾಳೆ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಉದ್ದವ್ ಠಾಕ್ರೆ ತಿಳಿಸಿದರು.

ಕೋವಿಡ್ ಗೆ ನೆರವಾಗಲು ಬಯಸುತ್ತಾರಾ ಅಥವಾ ಸೋಂಕು ನಿಯಂತ್ರಿಸಲು ಕೆಲಸ ನಿರ್ವಹಿಸುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸುತ್ತಾರಾ ಎಂಬುದನ್ನು ಜನರು ನಿರ್ಧರಿಸಬೇಕಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.SHARE THIS

Author:

0 التعليقات: