Friday, 16 April 2021

ರಾತ್ರಿ ಕರ್ಫ್ಯೂ ಮುಂದುವರಿಕೆ, ಇನ್ನಷ್ಟು ನಗರಗಳಿಗೆ ವಿಸ್ತರಿಸುವ ಬಗ್ಗೆ ಎ.20ರಂದು ತೀರ್ಮಾನ: ಸಿಎಂ ಯಡಿಯೂರಪ್ಪ


 ರಾತ್ರಿ ಕರ್ಫ್ಯೂ ಮುಂದುವರಿಕೆ, ಇನ್ನಷ್ಟು ನಗರಗಳಿಗೆ ವಿಸ್ತರಿಸುವ ಬಗ್ಗೆ ಎ.20ರಂದು ತೀರ್ಮಾನ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಎಂಟು ನಗರಗಳಲ್ಲಿ ವಿಧಿಸಿರುವ ಕೊರೋನ ರಾತ್ರಿ ಕರ್ಫ್ಯೂವನ್ನು ಎ.20ರ ಬಳಿಕವೂ ಮುಂದುವರಿಸುವ ಹಾಗೂ ಇನ್ನಷ್ಟು ಪ್ರದೇಶಗಳಿಗೆ ಇದನ್ನು ವಿಸ್ತರಿಸುವ ಬಗ್ಗೆ ಎ.20ರಂದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌–19 ಪಾಸಿಟಿವ್ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದೆಗೆ ಮಾತನಾಡುತ್ತಿದ್ದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳ ಪ್ರಮಾಣ ವಿಪರೀತ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಇಂದು ಅಧಿಕಾರಗಳ ಸಭೆ ನಡೆಸಲಾಗಿದೆ. ತಜ್ಞರ ಸಮಿತಿ ನೀಡಿರುವ ವರದಿ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗಿದೆ.  ಆದರೆ ಸದ್ಯ ಯಾವುದೇ ಕಠಿಣ ಕ್ರಮದ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಎ.20ರಂದು ಮತ್ತೆ ಅಧಿಕಾರಿಗಳ ಸಭೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಇನ್ನಷ್ಟು ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ಅದೇರೀತಿ ಸದ್ಯ ಎಂಟು ನಗರಗಳಲ್ಲಿ ವಿಧಿಸಿರುವ ರಾತ್ರಿ ಕರ್ಫ್ಯೂವನ್ನು ಎ.20ರ ಬಳಿಕವು ಮುಂದುವರಿಸುವ ಬಗ್ಗೆ ಹಾಗೂ ಇನ್ನಷ್ಟು ಜಿಲ್ಲಾ ಕೇಂದ್ರಗಳಿಗೆ ವಿಸ್ತರಿಸುವ ಬಗ್ಗೆಯೂ ನಿರ್ಧರಿಸಲಾಗುವುದು ಮುಖ್ಯಮಂತ್ರಿ ತಿಳಿಸಿದರು.


SHARE THIS

Author:

0 التعليقات: