Wednesday, 14 April 2021

ಕರ್ನಾಟಕದಲ್ಲಿ ಅಬ್ಬರಿಸಿದ ಕೊರೋನಾ;24 ಗಂಟೆಯಲ್ಲಿ 11,265 ಮಂದಿಗೆ ಸೋಂಕು ಧೃಡ, 38 ಬಲಿ


ಕರ್ನಾಟಕದಲ್ಲಿ ಅಬ್ಬರಿಸಿದ ಕೊರೋನಾ;24 ಗಂಟೆಯಲ್ಲಿ 11,265 ಮಂದಿಗೆ ಸೋಂಕು ಧೃಡ, 38 ಬಲಿ

ಬೆಂಗಳೂರು : ರಾಜ್ಯದ 24 ಗಂಟೆಯಲ್ಲಿ 11,265 ಮಂದಿಗೆ ಸೋಂಕು ಧೃಡವಾಗಿದ್ದು, ಮಹಾಮಾರಿ ಸೋಂಕಿಗೆ ಇಂದು ಬರೋಬ್ಬರಿ 38 ಮಂದಿ ಬಲಿಯಾಗಿದ್ದಾರೆ.

ಹೌದು, ರಾಜ್ಯದಲ್ಲಿ ಇಂದು ಹೊಸದಾಗಿ 11,265 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10,94,912 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 4364 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 9,96,367 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 85,480 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ 38 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,046 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೂಡ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 8155 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 23 ಜನ ಸೋಂಕಿತರು ಮೃತಪಟ್ಟಿದ್ದು, ಸದ್ಯ 63,167 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.



SHARE THIS

Author:

0 التعليقات: