Friday, 23 April 2021

ದೆಹಲಿಯಲ್ಲಿ 24 ಗಂಟೆಗಳಲ್ಲಿ ಬರೋಬ್ಬರಿ 24,331 ಕೊರೋನಾ ಪ್ರಕರಣ ಪತ್ತೆ


ದೆಹಲಿಯಲ್ಲಿ 24 ಗಂಟೆಗಳಲ್ಲಿ ಬರೋಬ್ಬರಿ 24,331 ಕೊರೋನಾ ಪ್ರಕರಣ ಪತ್ತೆ

ದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಕೋವಿಡ್‌ ಅಟ್ಟಹಾಸ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 24,331 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

348 ಸೋಂಕಿತರು ಒಂದೇ ದಿನ ಬಲಿಯಾಗಿದ್ದಾರೆ. ಆ ಮೂಲಕ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 13,541ಕ್ಕೆ ಏರಿಕೆಯಾಗಿದೆ. 23,572 ಜನ ವೈರಸ್‌ನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ದೆಹಲಿಯಲ್ಲಿ ಇದೀಗ ಒಟ್ಟು ಸೋಂಕಿತರ ಸಂಖ್ಯೆ 9,80,679ಕ್ಕೆ ಏರಿಕೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 92,029ಕ್ಕೆ ಏರಿದೆ. ಒಟ್ಟಾರೆ ಗುಣಮುಖರಾದವರ ಸಂಖ್ಯೆ 8,75,109ಕ್ಕೆ ತಲುಪಿದೆ.

SHARE THIS

Author:

0 التعليقات: