Saturday, 24 April 2021

ರಾಜ್ಯಕ್ಕೆ ಇಂದು ಕೊರೋನಾ ಕರಾಳ ದಿನ : ಒಂದೇ ದಿನ 30,000 ಕೇಸ್, 208 ಸಾವು..!


ರಾಜ್ಯಕ್ಕೆ ಇಂದು ಕೊರೋನಾ ಕರಾಳ ದಿನ : ಒಂದೇ ದಿನ 30,000 ಕೇಸ್, 208 ಸಾವು..!

ಬೆಂಗಳೂರು : ರಾಜ್ಯದಲ್ಲಿಂದು ಅಕ್ಷರಶಃ ಕೊರೋನಾ ಅಬ್ಬರಿಸಿ ಬೊಬ್ಬಿರಿದಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 29438 ಮಂದಿಗೆ ಕೊರೋನಾ ವಕ್ಕರಿಸಿದೆ. ಮಹಾಮಾರಿಗೆ ರಾಜ್ಯದಲ್ಲಿ ಇಂದು 208 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1304397 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 14283ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಕೊರೋನಾ ಬ್ಲಾಸ್ಟ್ ಆಗಿದ್ದು 17342 ಜನರಿಗೆ ಕೊರೋನಾ ತಗುಲಿದ್ದು, 149 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 632923 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 5723 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 9058 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1055612 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 234483 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 1280 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
SHARE THIS

Author:

0 التعليقات: