Saturday, 17 April 2021

ರೈಲಿನಲ್ಲಿ ಪ್ರಯಾಣಿಸುವಾಗ, ನಿಲ್ದಾಣದಲ್ಲಿ ಮಾಸ್ಕ್ ಧರಿಸದೇ ಇದ್ದರೆ 500 ರೂ. ದಂಡ


 ರೈಲಿನಲ್ಲಿ ಪ್ರಯಾಣಿಸುವಾಗ, ನಿಲ್ದಾಣದಲ್ಲಿ ಮಾಸ್ಕ್ ಧರಿಸದೇ ಇದ್ದರೆ 500 ರೂ. ದಂಡ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಹಲವು ನಿಯಮಗಳನ್ನು ಅಳವಡಿಸುತ್ತಿದ್ದು, ರೈಲುಗಳಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿಯವರೆಗೆ ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ.

ಮಾಸ್ಕ್ ಧರಿಸುವ ಆದೇಶವನ್ನು ಮುಂದಿನ ಆದೇಶದವರೆಗೆ 6 ತಿಂಗಳವರೆಗೆ ಜಾರಿಗೆ ತರಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಈ ಮಧ್ಯೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಇತ್ತೀಚೆಗೆ ಕೋವಿಡ್-19 ಮಾರ್ಗಸೂಚಿಯನ್ನು ಹೊರಡಿಸಿತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿ ಮತ್ತು ಶಿಷ್ಟಾಚಾರಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಮತ್ತು ಸಂಬಂಧಪಟ್ಟ ಸ್ವಚ್ಛತೆಗೆ ಸಂಬಂಧಿಸಿದಂತೆ ರೈಲ್ವೆಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಟೇಕ್ ಎವೆ ಕಿಟ್ ವಸ್ತುಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ, ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.


SHARE THIS

Author:

0 التعليقات: