Wednesday, 14 April 2021

ಮಾಜಿ ಸಚಿವ ಯು.ಟಿ. ಖಾದರ್ ಕಾರು ಅಪಘಾತ


 ಮಾಜಿ ಸಚಿವ ಯು.ಟಿ. ಖಾದರ್ ಕಾರು  ಅಪಘಾತ

ದಾವಣಗೆರೆ: ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗ್ಗೆ 8:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ  ಒಲಾಲ್ ಕ್ರಾಸ್ ಬಳಿ ಖಾದರ್ ಅವರ ಕಾರಿನ ಎದುರಿನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಶಾಸಕರ ಕಾರು ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಇದರಿಂದ ಖಾದರ್ ಅವರ ಮುಖ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಬಳಿಕ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನಲ್ಲಿರುವ ಕುಟುಂಬ ವೈದ್ಯರ ಬಳಿ ಚಿಕಿತ್ಸೆಗಾಗಿ ತೆರಳಿದ್ದಾರೆ.

ಅದೇರೀತಿ ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.


SHARE THIS

Author:

0 التعليقات: