ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಿಸಿದ ರಾಜ್ಯ ಸರಕಾರ
ಬೆಂಗಳೂರು: ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ವಾಹನ ತೆರಿಗೆಯನ್ನು ಪಾವತಿಸಲು ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆ ಅವಧಿಯನ್ನು ಮೇ 15ರವರೆಗೆ ಮತ್ತು ದಂಡ ಸಹಿತವಾಗಿ ಎಪ್ರಿಲ್ 30ರ ಒಳಗೆ ಪಾವತಿಸಬೇಕಾಗಿದ್ದ ಅವಧಿಯನ್ನು ಮೇ31 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
0 التعليقات: