Thursday, 1 April 2021

ಚಾಕುವಿನಿಂದ ಇರಿದು ಬರ್ಬರ ಹತ್ಯೆ.


ಚಾಕುವಿನಿಂದ ಇರಿದು ಬರ್ಬರ ಹತ್ಯೆ.

ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುವನ್ನು ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 ಮಧುವಿನ ಹತ್ಯೆಯ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಶವವನ್ನು ರಾಷ್ಟ್ರೀಯ ಹೆದ್ದಾರಿ-209ರ ಹಲಗೂರು ಮುಖ್ಯ ವೃತ್ತದಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು.SHARE THIS

Author:

0 التعليقات: