Monday, 19 April 2021

ಜನರು ಗುಂಪು ಸೇರುವುದರಿಂದಲೇ ರಾಜ್ಯದಲ್ಲಿ ಕೊರೊನಾ ಹರಡುತ್ತಿದೆ : ಸಚಿವ ಡಾ.ಕೆ. ಸುಧಾಕರ್


 ಜನರು ಗುಂಪು ಸೇರುವುದರಿಂದಲೇ ರಾಜ್ಯದಲ್ಲಿ ಕೊರೊನಾ ಹರಡುತ್ತಿದೆ : ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಜನರು ಗುಂಪು ಸೇರೋದ್ರಿಂದಲೇ ಕೋವಿಡ್ ಸೋಂಕು ಹರಡುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರು ಗುಂಪು ಸೇರುವುದರಿಂದಲೇ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಲು ಕಾರಣ. ರಾತ್ರೋ ರಾತ್ರಿ ವೈದ್ಯರನ್ನು, ಆರೋಗ್ಯ ಕಾರ್ಯಕರ್ತರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ತರುತ್ತೇವೆ. ಕೋವಿಡ್ ಹೆಚ್ಚಿರುವ ಉಳಿದ ಜಿಲ್ಲೆಗಳಿ ಪ್ರತ್ಯೇಕ ನಿಯಮಗಳನ್ನು ಜಾರಿಗೊಳಿಸುತ್ತೇವೆ. ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಕಠಿಣ ನಿಯಮಗಳ ಜಾರಿ ಬಗ್ಗೆ ನಿರ್ಧರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


SHARE THIS

Author:

0 التعليقات: