Saturday, 3 April 2021

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲಾ : ಮಾಜಿ ಸಿಎಂ ಸಿದ್ದರಾಮಯ್ಯ


 ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲಾ : ಮಾಜಿ ಸಿಎಂ ಸಿದ್ದರಾಮಯ್ಯ 

ಹಾಸನ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರೈತರಿಗೆ ಸುಳ್ಳು ಆಶ್ವಾಸನೆ ನೀಡುತ್ತ ಅಧಿಕಾರ ಹಿಡಿಯುವಂತಹ ಪಕ್ಷ ನಮ್ಮದಲ್ಲ; ಬಿಜೆಪಿ ಅಧಿಕಾರಕ್ಕೆ ಬರುವ ಮುಂಚೆ ರೈತರಿಗೆ ನಾನಾ ಆಮಿಷವನ್ನು ಒಡ್ಡಿತ್ತು ಆದರೆ ನಂತರ ರೈತರನ್ನು ಕಡೆಗಣಿಸಿದೆ.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಮಸ್ಯೆಯನ್ನು ಬಗೆಹರಿಸಲಿದ್ದು . ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

ಚನ್ನರಾಯಪಟ್ಟಣ- ಹಿರೀಸಾವೆ -ನುಗ್ಗೆಹಳ್ಳಿ- ಸೋಮನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಏತ ನೀರಾವರಿ ಯೋಜನೆಗೆ ಹಿಂದಿನ ಕಾಂಗ್ರೆಸ್ ಸರ್ಕಾರ ಪ್ರಯತ್ನ ನಡೆಸಿದ್ದು ಈ ಹಿನ್ನೆಲೆಯಲ್ಲಿ ಇಂದು ಇಲ್ಲಿನ ಹತ್ತಾರು ಕೆರೆಗಳಿಗೆ ನೀರು ಹರಿದಿದೆ ಚನ್ನರಾಯಪಟ್ಟಣ ಕ್ಕೆ 176 ಕೋಟಿ ರೂಪಾಯಿಗಳನ್ನು ಏತ ನೀರಾವರಿ ಯೋಜನೆಗೆ ನಾವು ನೀಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.


SHARE THIS

Author:

0 التعليقات: