Friday, 2 April 2021

ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ: ಎಂಟು ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ


ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ: ಎಂಟು ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ

ಬೆಂಗಳೂರು: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಇಂದು ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿ ಎ.20ರ ವರೆಗೆ ಅನ್ವಯವಾಗಲಿದೆ. 

ರಾಜ್ಯಾದ್ಯಂತ ವಿದ್ಯಾಗಮ ಸೇರಿ ಎಲ್ಲಾ ಶೈಕ್ಷಣಿಕ ಚಟುವಟಿಕಗಳನ್ನು ಸ್ಥಗಿತಗೊಳಿಸಲಾಗಿದೆ. 10, 11 ಮತ್ತು 12ನೇ ತರಗತಿ ಯಥಾಸ್ಥಿತಿ ಮುಂದುವರಿಯಲಿದೆ. ರ್‍ಯಾಲಿ, ಧರಣಿ, ಮುಷ್ಕರಗಳನ್ನು ನಿಷೇಧಿಸಲಾಗಿದೆ. ಧಾರ್ಮಿಕ ಸ್ಥಳಗಲ್ಲಿ ವೈಯುಕ್ತಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಗುಂಪು ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.

ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಮೈಸೂರು, ಕಲಬುರಗಿ ಈ 8 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದ್ದು, ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಬಾರ್, ಪಬ್, ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಗ್ರಾಹಕರ ಸಂಖ್ಯೆ 50ಶೇ. ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.



SHARE THIS

Author:

0 التعليقات: