Sunday, 18 April 2021

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್


 ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ಬೆಳ್ತಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಪ್ರಚಾರ ಕಾರ್ಯ ಮುಗಿಸಿ ಬಂದ ಅವರು ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ತಗಲಿರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೂ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


SHARE THIS

Author:

0 التعليقات: