Thursday, 15 April 2021

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ: "ಯೆಲ್ಲೋ ಅಲರ್ಟ್" ಘೋಷಣೆ

 

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ: "ಯೆಲ್ಲೋ ಅಲರ್ಟ್" ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವಡೆ ನಿನ್ನೆ ಭಾರೀ ಮಳೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆಯಾಗಿದೆ.

ರಾಜ್ಯದ ರಾಯಚೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಶಿವಮೊಗ್ಗ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಾಮರಾಜನಗರದಲ್ಲಿ ಇಂದಿನಿಂದ ಮೂರು ದಿನ ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


SHARE THIS

Author:

0 التعليقات: